ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ

ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ ಮೈಸೂರು ಜಯದೇವ ಆಸ್ಪತ್ರೆ ಸಿಬ್ಬಂದಿಗಳು ಧರ್ಮಸ್ಥಳಕ್ಕೆ ತೆರಳುವಾಗ ಬಿದರಹಳ್ಳಿ ಗ್ರಾಮದ ಬಳಿ ಬಿದರಹಳ್ಳಿ ಗ್ರಾಮದ ಬಳಿ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಪ್ರವಾಸಿಗರಿಗೆ ಗಂಭೀರ ಗಾಯವಾಗಿದ್ದು, ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. 11 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್!, ಯಾಕೆ ಗೊತ್ತಾ?; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!












