ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಪ್ರಪಾತಕ್ಕೆ ಪ್ರವಾಸಿಗರ ಕಾರೊಂದು ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ನಡೆದಿದೆ.

ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ

ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಸುಮಾರು 250 ಅಡಿ ಪ್ರಪಾತಕ್ಕೆ ಕಾರು ಉರುಳಿದೆ. 250 ಅಡಿ ಎತ್ತರದಿಂದ ಬೀಳುವಾಗ ಮರ, ರೆಂಬೆ-ಕೊಂಬೆಗಳಿಗೆ ಸಿಲುಕಿದೆ. ಹೀಗಾಗಿ ಕಾರು ಬೀಳುವ ವೇಗ ಕಡಿಮೆಯಾಗಿದೆ. ತೆಲಂಗಾಣ ಮೂಲದ ಪ್ರವಾಸಿಗರ ಕಾರು ಇದಾಗಿದ್ದು, ಕಾರಿನಲ್ಲಿದ್ದ ಐವರಿಗೂ ಗಂಭೀರ ಗಾಯವಾಗಿದೆ. ತಕ್ಷಣವೇ ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!
ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?












