ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಗ್ರಾಮ ಪಂಚಾಯತಿ ಆವರಣಕ್ಕೆ ಕಾರೊಂದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?

ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು, ದಟ್ಟ ಮಂಜಿನಿಂದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಪ್ರಪಾತದಿಂದ ಉರುಳಿ ಗ್ರಾಮ ಪಂಚಾಯತಿ ಕಚೇರಿಯ ಆವರಣಕ್ಕೆ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?; ಕೇಳಿದ್ರೆ ಶಾಕ್ ಆಗ್ತೀರಾ…












