ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದು ಮಹಿಳೆಯೊರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ವನಿತಾ (38) ಸಾವನ್ನಪ್ಪಿರುವ ಮಹಿಳೆ.
ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ

ಇಂದು ಬೆಳಗಿನ ಜಾವ ಹಾಸನಾಂಬೆಯ ದರ್ಶನಕ್ಕೆಂದು ಗವನಹಳ್ಳಿ ಗ್ರಾಮದ ಮಂಜು ವನಿತಾ ದಂಪತಿ ಹೊರಟಿದ್ದರು. ಕಲ್ಕೆರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಉರುಳಿ ಬಿದ್ದಿದೆ. ಅಪಘಾತದ ವಿಷಯ ತಿಳಿದ ಸ್ಥಳೀಯರು ತಕ್ಷಣ ವನಿತಾ ಅವರನ್ನು ಬದುಕಿಸಲು ಹರಸಾಹಸ ಪಟ್ಟುರು ಪ್ರಯೋಜನವಾಗಲಿಲ್ಲ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?












