ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ದಟ್ಟ ಮಂಜಿನಿಂದ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್- ಡಿಸೇಲ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪ ನಡೆದಿದೆ.
ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ

ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪೆಟ್ರೋಲ್ – ಡಿಸೇಲ್ ಸಾಗಿಸುತ್ತಿದ್ದ ಟ್ಯಾಂಕರ್ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪ ದಟ್ಟ ಮಂಜಿನಿಂದ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಪೆಟ್ರೋಲ್ – ಡೀಸಲ್ ಲಿಕ್ ಆಗುತ್ತಿದ್ದು, ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)















