ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಟ್ರಾಕ್ಟರ್ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ತೀರ್ಥಕೆರೆ ಗ್ರಾಮದ ಬಳಿ ನಡೆದಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ದಿನಸಿ ಖರೀದಿಗಾಗಿ 40 ಅಸ್ಸಾಂ ಕಾರ್ಮಿಕರು ಸೇರಿದಂತೆ ಸ್ಥಳೀಯರು ಟ್ರಾಕ್ಟರ್ ನಲ್ಲಿ ಜಯಪುರಕ್ಕೆ ಬಂದಿದ್ದರು. ಜಯಪುರ ಪಟ್ಟಣದಿಂದ ವಾಪಸ್ ತೆರಳುವಾಗ ತೀರ್ಥಕೆರೆ ಗ್ರಾಮದ ಬಳಿ ಟ್ರ್ಯಾಲಿ ಪಲ್ಟಿಯಾಗಿ 20 ಅಡಿ ಆಳಕ್ಕೆ ಟ್ರಾಕ್ಟರ್ ಬಿದ್ದಿದೆ. ಪರಿಣಾಮ 10 ಕ್ಕೂ ಅಧಿಕ ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ಜಯಪುರ, ಕೊಪ್ಪ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಪೋಷಕರ ಗಮನಕ್ಕೆ; ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ತೀರ್ಥಕೆರೆ ಸಮೀಪದ ಎಸ್ಟೇಟ್ ನಲ್ಲಿ ಕೆಲಸಕ್ಕಿದ್ದ ಕಾರ್ಮಿಕರು ಎಂದು ತಿಳಿದು ಬಂದಿದ್ದು, ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಬಿಡುಗಡೆ!; ಹಣ ಬಾರದೇ ಇದ್ರೆ ಈ ರೀತಿ ಮಾಡಿ












