ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ಡೈನಾಮೈಟ್ ಸಿಡಿದು ಮನೆಗಳ ಮೇಲೆ ಕಲ್ಲುಗಳು ಬಿದ್ದು ಹಾನಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಸಾತೋಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

ಭದ್ರಾ ಮೆಲ್ದಂಡೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಬಂಡೆ ಒಡೆಯಲು ಗುರುವಾರ ರಾತ್ರಿ ಡೈನಾಮೈಟ್ ಸಿಡಿಸಿದ್ದಾರೆ. ಆದರೆ, ಇದರ ಜೊತೆ ಜಿಲೆಟಿನ್ ಕಡ್ಡಿಗಳನ್ನು ಬಳಸಿದ್ದರಿಂದ ಸ್ಫೋಟದ ಪ್ರಮಾಣ ಹೆಚ್ಚಾಗಿ ದೊಡ್ಡ ದೊಡ್ಡ ಬಂಡೆ ಕಲ್ಲಿನ ತುಂಡುಗಳು ಪಕ್ಕದ ಮನೆಗಳ ಮೇಲೆ ಬಿದ್ದಿದೆ ಎನ್ನಲಾಗಿದೆ.
ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್
ಇನ್ನು ಈ ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?












