
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮುಂಗಾರು ಆರಂಭವಾದಾಗಿನಿಂದಲೂ ರಾಜ್ಯದಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಹೀಗಾಗಿ ಅದೆಷ್ಟೋ ವರ್ಷಗಳಿಂದ ತುಂಬದ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲವಾಗಿರುವ ಹಿರೇಕೊಳಲೆ ಕೆರೆ ತುಂಬಿದ್ದು, ಜಿಲ್ಲಾಡಳಿತ ಬಾಗಿನ ಅರ್ಪಿಸಿದ್ದಾರೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುರಿದ ಮಳೆಯಿಂದ ಕೆರೆಗೆ ಹರಿದುಬಂದ ಅಪಾರ ಪ್ರಮಾಣದ ನೀರಿನಿಂದ ಜಿಲ್ಲೆಯಲ್ಲೇ ಕೋಡಿ ಬಿದ್ದ ಮೊದಲ ಕೆರೆಗೆ ಇದಾಗಿದೆ. ಹೀಗಾಗಿ ಚಿಕ್ಕಮಗಳೂರು ಶಾಸಕ ತಮ್ಮಯ್ಯ ದಂಪತಿ, ಡಿಸಿ ಮೀನಾ ನಾಗರಾಜ್, ತಹಶಿಲ್ದಾರ್ ರೇಷ್ಮಾ ರಿಂದ ಕೆರಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
















