ಕಳಚಿದ ನಕ್ಸಲ್ ಹೋರಾಟದ ಕೊನೆಯ ಕೊಂಡಿ!

ಭೂಗತರಾಗಿದ್ದ ಆರು ಜನ ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಬೆಂಗಳೂರಿನಲ್ಲಿ ಬುಧವಾರ ಶರಣಾದರು. ಇದರೊಂದಿಗೆ ನಕ್ಸಲ್‌ ಮುಕ್ತ ರಾಜ್ಯದತ್ತ ಕರ್ನಾಟಕ ಹೆಜ್ಜೆ ಇಟ್ಟಿದೆ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಶರಣಾಗತಿಯಾದ ನಕ್ಸಲರು ಯಾರು? ಇವರ ಹಿನ್ನಲೆ ಏನು?:
ಲತಾ ಮುಂಡಗಾರು:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಲತಾ ಮಂಡಗಾರು ಬಡ ಆದಿವಾಸಿ ಕುಟುಂಬದ ಹೆಣ್ಣುಮಗಳು. ಬಡತನ ಹಾಗೂ ಶಿಕ್ಷಕರ ಕಿರುಕುಳದಿಂದಾಗಿ 6ನೇ ತರಗತಿಗೆ ಓದು ನಿಲ್ಲಿಸಿದರು. ನೂರಾರು ಆದಿವಾಸಿ ಕುಟುಂಬಗಳಂತೆಯೇ ಈ ಕುಟುಂಬವು ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಡಿ ಮನೆ ಕಳೆದುಕೊಳ್ಳುವ ಪರಿಸ್ಥಿತಿ ಬಂದಾಗ ಅದರ ವಿರುದ್ಧ ಹೋರಾಟ ನಡೆಸುತ್ತಿದ್ದ ಚಳುವಳಿಯಲ್ಲಿ ಭಾಗವಾದರು.

ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಬೆಲೆ ನೀಡದ ಸರ್ಕಾರದ ಧೋರಣೆಗೆ ಬೇಸತ್ತು 2000 ರಲ್ಲಿ 18ನೇ ವಯಸ್ಸಿನಲ್ಲಿ ಸಶಸ್ತ್ರ ಹೋರಾಟಕ್ಕೆ ಧುಮುಕಿ ಅಂದಿನಿಂದ ಕರ್ನಾಟಕ ಹಾಗೂ ಕೇರಳದಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಎಂಬ ಹಣೆ ಪಟ್ಟಿಕಟ್ಟಿಕೊಂಡಿದ್ದರು.

ನೇತ್ರಾವತಿ ತಂಡದ ನಾಯಕತ್ವ ವಿಕ್ರಂ ಗೌಡ ವಹಿಸಿದ್ದರೆ ಭದ್ರಾ ತಂಡದ ನಾಯಕಿಯಾಗಿ ಮುಂಡಗಾರು ಲತಾ ಗುರುತಿಸಿಕೊಂಡಿದ್ದರು. ನವೆಂಬರ್ ತಿಂಗಳಲ್ಲಿ ವಿಕ್ರಂ ಗೌಡನ ಹತ್ಯೆಯ ಬಳಿಕ ನಡೆದ ಬೆಳವಣಿಗೆಗಳಲ್ಲಿ ಶರಣಾಗತಿ ಬಯಸಿದ ನಕ್ಸಲರಲ್ಲಿ ಇವರು ಪ್ರಮುಖ ನಕ್ಸಲ್ ನಾಯಕಿ.

ಲತಾ ಮುಂಡಗಾರು:
ಲತಾ ಮುಂಡಗಾರು:

ಇದನ್ನೂ ಓದಿ: 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ!; ರಾಜ್ಯ ಸರ್ಕಾರದಿಂದ ಇಂತಹ ಸಿಬ್ಬಂದಿಗಳಿಗೆ ಸಿಹಿಸುದ್ದಿ; ಯಾರು ಅರ್ಹರು ಗೊತ್ತಾ?


ಸುಂದರಿ ಕುತ್ಲೂರು:
ಸುಂದರಿಯೂ ಸಹ ಲತಾ ರೀತಿಯಲ್ಲಿ ಆದಿವಾಸಿ ಮಹಿಳೆ. ಬಡತನ ಹಾಗೂ ಶಾಲೆ ದೂರವಿದ್ದುದರಿಂದ ಮೂರನೆಯ ತರಗತಿಯ ನಂತರ ಶಾಲೆ ತೊರೆದರು. ಇವರ ಕುಟುಂಬವೂ ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಿಂದಾಗಿ ತನ್ನ ಎಲ್ಲವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿದ್ದರು. ಪ್ರಜಾಸತ್ತಾತ್ಮಕ ಚಳುವಳಿ ಫಲ ನೀಡದೆಂದು ಕಂಡಾಗ ಆಗಿನ ಹಲವರು ಯುವಜನರಂತೆ ಸುಂದರಿಯೂ ಸಹ ಆಯುಧವನ್ನು ಕೈಗೆತ್ತಿಕೊಂಡರು.

ತನ್ನ 19ನೇ ವಯಸ್ಸಿನಲ್ಲಿ 2004 ರಲ್ಲಿ ನಕ್ಸಲ್ ಹೋರಾಟಕ್ಕೆ ದುಮುಕಿದ್ದು, 20 ವರ್ಷಗಳಿಂದ ನಕ್ಸಲ್ ತಂಡದಲ್ಲಿದ್ದು ಮೋಸ್ಟ್‌ ವಾಂಟೆಡ್ ಲಿಸ್ಟ್‌ ನಲ್ಲಿದ್ದಾರೆ. ತನ್ನ ಹಾಗೂ ನೆರೆಹೊರೆಯ ಕುಟುಂಬಗಳ ಮೇಲೆ ಪೊಲೀಸರು ನಡೆಸುತ್ತಿದ್ದ ದಾಳಿಗಳು ದೌರ್ಜನ್ಯಗಳನ್ನು ಇಂದಿಗೂ ನೋವಿನಿಂದ ನೆನಪಿಸಿಕೊಳ್ಳುವ ಸುಂದರಿ ತನ್ನ ಹೋರಾಟದ ಕೆಚ್ಚನ್ನು ಉಳಿಸಿಕೊಂಡಿದ್ದು ಇನ್ನು ಮುಂದೆ ಪ್ರಜಾತಾಂತ್ರಿಕ ಚಳುವಳಿಗಳ ಭಾಗವಾಗಲು ಮುಖ್ಯ ವಾಹಿನಿಯನ್ನು ಸೇರಿದ್ದಾರೆ.

ಸುಂದರಿ ಕುತ್ಲೂರು:
ಸುಂದರಿ ಕುತ್ಲೂರು:

ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವನಜಾಕ್ಷಿ:
10ತಹ ವರೆಗೂ ಓದಿರುವ ವನಜಾಕ್ಷಿ ಈ ತಂಡದ ಅತಿ ಹಿರಿಯ ಸದಸ್ಯೆ. 1985 ರಲ್ಲಿ ಓದು ನಿಲ್ಲಿಸಿದ ಈ ಆದಿವಾಸಿ ಮಹಿಳೆ ತನ್ನ ಗ್ರಾಮದಲ್ಲಿ ಸಾರ್ವಜನಿಕ ಜೀವನದ ಭಾಗವಾಗಿ 1992 ಮತ್ತು 1997ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಎಂಟು ಜನ ಮಕ್ಕಳ ದೊಡ್ಡ ಕುಟುಂಬದ ಹೆಣ್ಣು ಮಗಳಾಗಿ ಟೈಪ್ ರೈಟಿಂಗ್ ಕಲಿತು, ಹೊಲಿಗೆಯನ್ನು ಜೀವ ಜೀವನಾಧಾರವಾಗಿಸಿಕೊಂಡರು. ರಾಜಕೀಯವಾಗಿ ಸಕ್ರಿಯವಾಗಿದ್ದರೂ ಸಹ ಇವರಿಗೆ ಮತ್ತು ಇವರ ಕುಟುಂಬಕ್ಕೆ ಬಲಾಢ್ಯರಿಂದ ತಮ್ಮ ತುಂಡುಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ತಾಯಿ ಮಾನಸಿಕ ಅಸ್ವಸ್ಥತೆಗೆ ಗುರಿಯಾದರೆ ಒಬ್ಬ ತಮ್ಮ ಆತ್ಮಹತ್ಯೆಗೆ ಶರಣಾದ. ಅಲ್ಲದೆ ಸುತ್ತಮುತ್ತ ಇದ್ದ ಹಲವು ಕುಟುಂಬಗಳು ಸಹ ತಮ್ಮಂತೆ ಬಡತನ ಶೋಷಣೆಗಳಿಗೆ ಬಲಿಯಾಗುತ್ತಿದ್ದುದ್ದನ್ನು ಕಂಡ ವನಜಾಕ್ಷಿ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡರು.

ಸಶಸ್ತ್ರ ಹೋರಾಟವೇ ದಾರಿ ಎಂಬ ನಿರ್ಧಾರಕ್ಕೂ ಆ ಕಾಲದಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಳುವಳಿಯ ಪ್ರಭಾವದಿಂದಾಗಿ ಬಂದರು. 2000 ನೇ ಇಸವಿಯಿಂದ ಮಾವೋವಾದಿ ಪಕ್ಷದ ಭಾಗವಾಗಿ ಕರ್ನಾಟಕ ಹಾಗೂ ಕೇರಳದಲ್ಲಿ ಸಂಚರಿಸುವ ದಳದ ಸದಸ್ಯೆಯಾಗಿದ್ದರು. ತನ್ನ ಹೋರಾಟವನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿಯೂ ಮುಂದುವರಿಸಬಹುದಾದ ಅವಕಾಶಗಳನ್ನು ಅರ್ಥ ಮಾಡಿಕೊಂಡು ಈಗ ಮುಖ್ಯವಾಹಿನಿಗೆ ಬಂದಿದ್ದಾರೆ.

ವನಜಾಕ್ಷಿ:
ವನಜಾಕ್ಷಿ:

ಇದನ್ನೂ ಓದಿ: 15,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಜಯಣ್ಣ ಅರೋಲಿ:
ಜಯಣ್ಣ ಆರೋಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅರೋಲಿ ಗ್ರಾಮದವರು. ಎರಡನೇಯ ಬಿಎ ವರೆಗೂ ಓದಿರುವ ದಲಿತ ಯುವಕ. ಕಾಲೇಜಿನಲ್ಲಿ ಇರುವಾಗಲೇ ಆ ಸಮಯದಲ್ಲಿ ಆ ಭಾಗದಲ್ಲಿ ನಡೆಯುತ್ತಿದ್ದ ಮಾವೋವಾದಿ ಚಳುವಳಿಯ ಕಡೆ ಆಕರ್ಷಿತರಾದರು. ಇದರ ಆಸಕ್ತಿಯಿಂದ ಚಳುವಳಿಯನ್ನು ಗಮನಿಸುತ್ತಿದ್ದ ಅವರಿಗೆ ಭಾಸ್ಕರ್ ಅವರ ಎನ್ಕೌಂಟರ್ ಹತ್ಯೆ ಆಘಾತವನ್ನುಂಟು ಮಾಡಿತು.

2000ನೇ ಇಸವಿಯಲ್ಲಿ ತನ್ನ 24ನೇ ವಯಸ್ಸಿನಲ್ಲಿ ದಳದ ಭಾಗವಾದರು. ಅಂದಿನಿಂದ ಕೇರಳ ಕರ್ನಾಟಕಗಳಲ್ಲಿ ಇವರ ಹೋರಾಟದ ಚಟುವಟಿಕೆಗಳು ನಡೆದಿದೆ. 2018 ರಲ್ಲಿ ಪುನಃ ಸಶಸ್ತ್ರ ಚಳುವಳಿಗೆ ಮರಳಿದರು. ಜನರ ಜೊತೆ ಸೇರಿ ಜನಪರ ಹೋರಾಟಗಳನ್ನು ನಡೆಸಲು ಮುಖ್ಯ ವಾಹಿನಿಗೆ ಬಂದಿದ್ದಾರೆ.

ಜಯಣ್ಣ ಅರೋಲಿ:
ಜಯಣ್ಣ ಅರೋಲಿ:

ಇದನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಮಹತ್ವದ ಆದೇಶ!; ಏನದು ಗೊತ್ತಾ? ಇಲ್ಲಿದೆ ನೋಡಿ


ವಸಂತ್ ಆರ್ಕಾಟ್ (ಕೆ.ವಸಂತ್):‌
ತಮಿಳುನಾಡಿನ ವೆಲ್ಲೂರಿನ ವಸಂತ್ ಬಿ ಟೆಕ್ ಪದವೀಧರ. ವೆಲ್ಲೂರು ಜಿಲ್ಲೆಯ ಆರ್ಕಾಟ್ ಅವರ ಊರು. ಸಮಾಜಮುಖಿ ಚಿಂತನೆಗಳಿಂದ ಪ್ರಭಾವಿತರಾದ ಇವರು ಹೋರಾಟಗಳನ್ನು ಗಮನಿಸುತ್ತಾ ಬೆಳೆದವರು. 2010ರಲ್ಲಿ ಪದವಿ ಮುಗಿಸಿದ ತಕ್ಷಣವೇ ಶಶಸ್ತ್ರ ಹೋರಾಟದ ಭಾಗವಾಗಿ ಅಂದಿನಿಂದಲೂ ಕೇರಳ ಕರ್ನಾಟಕಗಳಲ್ಲಿರುವ ದಳದ ಸದಸ್ಯರಾಗಿದ್ದರು. ಮಿತ ಭಾಷೆಯಾಗಿರುವ ವಸಂತ್ ತನ್ನ ಆದರ್ಶಗಳನ್ನು ಬಿಟ್ಟುಕೊಡದೆ ಹೋರಾಟದ ಮಾರ್ಗವನ್ನು ಬದಲಿಸಿ ಮುಖ್ಯವಾಹಿನಿಗೆ ಬಂದಿದ್ದಾರೆ.

ಜಿಶ ತಂಡದಲ್ಲಿನ ಎಲ್ಲರಿಗಿಂತಲೂ ತುಂಬಾ ಚಿಕ್ಕವರು. ಕೇರಳದ ಜೀಶ ವಯನಾಡ್ ಜಿಲ್ಲೆಯ ಮಕ್ಕಿಮಲದ ಆದಿವಾಸಿ ಮಹಿಳೆ. ಎಂಟನೇ ತರಗತಿಯವರೆಗೂ ವಿದ್ಯಾಭ್ಯಾಸ ಮಾಡಿದರು. 2018ರಲ್ಲಿ ಕೇರಳದಲ್ಲಿ ಸಶಸ್ತ್ರ ಹೋರಾಟದ ಭಾಗವಾಗಿದ್ದು, 2023ರಲ್ಲಿ ತಂಡದ ಇತರೆ ಸದಸ್ಯರೊಂದಿಗೆ ಕೇರಳದಿಂದ ಕರ್ನಾಟಕಕ್ಕೆ ಬಂದವರು.

ಕಾಡಿನಿಂದ ಬಂದ ಈ ಆರು ಜನ ನಕ್ಸಲರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಪ್ರಕರಣ ವಿಚಾರಣೆ ಪೂರ್ಣಗೊಂಡ ನಂತರ ಮತ್ತೆ ನಾಡಿಗೆ ಬರಲಿದ್ದಾರೆ. ನಂತರ ಸಂವಿಧಾನದ ಚೌಕಟ್ಟಿನಲ್ಲಿ ಬದುಕು ನಡೆಸಲಿದ್ದಾರೆ.

ವಸಂತ್ ಆರ್ಕಾಟ್ (ಕೆ.ವಸಂತ್):‌
ವಸಂತ್ ಆರ್ಕಾಟ್ (ಕೆ.ವಸಂತ್):‌

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇನ್ನೂ ಭೂಗತನಾಗಿಯೇ ಇರುವ ಏಕೈಕ ನಕ್ಸಲ್ ಕೋಟೆಹೊಂಡ ರವೀಂದ್ರ ಯಾರು..?
ರಾಜ್ಯದಲ್ಲಿ ಸಕ್ರಿಯವಾಗಿದ್ದ ಎಂಟು ಮಂದಿ ನಕ್ಸಲರಲ್ಲಿ ವಿಕ್ರಂ ಗೌಡ ಈದು ಗ್ರಾಮದಲ್ಲಿ ಎ.ಎನ್.ಎಫ್‌ ನಡೆಸಿದ ಎನ್‌ ಕೌಂಟರ್‌ ನಲ್ಲಿ ಕಳೆದ ತಿಂಗಳು ಬಲಿಯಾಗಿದ್ದ. ಇದೀಗ ಆರು ಮಂದಿ ಶರಾಣಾಗಿದ್ದು, ಉಳಿದ ಒಬ್ಬ ನಕ್ಸಲ್‌ ರವೀಂದ್ರ ಪತ್ತೆಯಾಗಿಲ್ಲ.

ರವೀಂದ್ರ ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಆತನನ್ನೂ ಸಂಪರ್ಕಿಸಿ ಕರೆತರುತ್ತೇವೆ ಎಂದು ಶಾಂತಿಗಾಗಿ ನಾಗರಿಕ ಸಮಿತಿ ತಿಳಿಸಿದೆ.

ಹಾಗಾದರೆ ಈ ರವೀಂದ್ರ ಯಾರು:
ನಕ್ಸಲ್‌ ಚಟುವಟಿಕೆಯಲ್ಲಿ ಗುರುತಿಸಿಕೊಂಡಿರುವ ರವೀಂದ್ರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಮೂಲದವನು.


ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಕೃಷಿ ಸಿಂಚಾಯಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!


ಮುಖ್ಯವಾಹಿನಿ ಸೇರಿದವರಿಗೆ ₹3 ಲಕ್ಷ ಪ್ರೋತ್ಸಾಹಧನ:
ಮುಖ್ಯವಾಹಿನಿಗೆ ಬಂದ ನಕ್ಸಲರಿಗೆ ತಲಾ ₹3 ಲಕ್ಷ ಪ್ರೋತ್ಸಾಹಧನ (ಮೊದಲ ಕಂತು) ಮಂಜೂರು ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಶರಣಾದವರಿಗೆ ಮೊದಲ ಹಂತದಲ್ಲಿ ₹3 ಲಕ್ಷ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ತೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಆರೋಲಿ ಅವರು ‘ಎ’ ವರ್ಗದಲ್ಲಿದ್ದು, ಅವರಿಗೆ ಒಟ್ಟು ತಲಾ ₹7.50 ಲಕ್ಷ, ಹೊರ ರಾಜ್ಯದವರಾದ ಕೆ.ವಸಂತ ಮತ್ತು ಜಿಷಾ ಅವರಿಗೆ ತಲಾ ₹4 ಲಕ್ಷ ಪ್ರೋತ್ಸಾಹಧನ ಸಿಗಲಿದೆ.


ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಸಹಾಯಧನ!; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.