ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಯೋಧ್ಯೆ ನಗರ ಸಿಂಗಾರಗೊಳ್ಳುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಜಗದ್ಗುರುಗಳು ರಾಮಮಂದಿರದ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಸಂದೇಶ ವೈರಲ್ ಆಗುತ್ತಿದೆ. ಈ ಕುರಿತು ಶ್ರೀಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ; RBI ನಿಂದ ಉದ್ಯೋಗಾವಕಾಶ; ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್ ಟಂಟ್ಗಳ ನೇಮಕ

ಶ್ರೀಮಠದ ಸ್ಪಷ್ಟನೆ ಏನು?:
ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ “www.dainikjagran.com” ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
ಆದರೆ ಜಗದ್ಗುರು ಶ್ರೀಶ್ರೀಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ “www.sringeri.net” ಎಂಬ ವೆಬ್ ಸೈಟ್ ನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಶ್ರೀಮಠದಿಂದ ಸ್ಪಷ್ಟನೆ ನೀಡಿದ್ದಾರೆ.
ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ
ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿಯಾಗಿರುವ ಘಟನೆ ಭಾನುವಾರ (ನಿನ್ನೆ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೆತೋಟದ ಬಳಿ ನಡೆದಿದೆ.












