
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ

ತಮ್ಮಿಹಳ್ಳಿ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಳ್ಳರು ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಾಗ ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದಿಂದ ಹಸು ಮೃತಪಟ್ಟಿದೆ.

ಇದನ್ನೂ ಓದಿ: SBI ನಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಕಡೂರು ತಾಲೂಕಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನ ನಡೆಯುತ್ತಿದ್ದು, ಬೆಂಗಳೂರು, ಉತ್ತರ ಕನ್ನಡದ ಬಳಿಕ ಇದೀಗ ಕಾಫಿನಾಡಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: £7,500 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ













