ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆ ಕೇಳಭಾಗದಲ್ಲಿ ದನದ ತಲೆ, ಕರುಳು, ಕಾಲುಗಳನ್ನು ತುಂಬಿಸಿ ನೀರಿಗೆ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ನಿನ್ನೆ ಸಂಜೆ ಸುಮಾರು 4 ಗಂಟೆಗೆ ಪಿಕಪ್ ವಾಹನದಲ್ಲಿ ಬಂದ ಅಪರಿಚಿತರು 11 ಗೋಣಿ ಚೀಲಗಳಲ್ಲಿ ದನದ ತಲೆ, ಕರುಳು, ಕಾಲುಗಳನ್ನು ತುಂಬಿಸಿ ನೀರಿಗೆ ಎಸೆದು ಹೋಗಿದ್ದಾರೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಈ ಭಾಗದಲ್ಲಿ ಪರಿಶಿಷ್ಟ ಪಂಗಡದ ಮಲೆಕುಡಿಯರು ವಾಸವಾಗಿದ್ದು, ಕುಡಿಯಲು ಇದೇ ನೀರನ್ನು ಬಳಸುತ್ತಾರೆ. ಪ್ರತಿದಿನ ಶಾಲೆಗೆ ಹೋಗುವ ಮಕ್ಕಳು ಇದೇ ರಸ್ತೆ ಬಳಸುವುದರಿಂದ ಸಾಂಕ್ರಾಮಿಕ ರೋಗ ಹರಡುವ ಅಪಾಯ ಇದೆ. ದುಷ್ಕರ್ಮಿಗಳು ಗಲಭೆ ಸೃಷ್ಟಿಸುವ ಉದ್ದೇಶದಿಂದ ದನದ ತ್ಯಾಜ್ಯಗಳನ್ನು ಎಸೆದು ಹೋಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ













