ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ನೇತೃತ್ವದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ ಎನ್ನುತ್ತಿರುವ ಕಾಂಗ್ರೆಸ್ ಇದೀಗ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್ ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ದ ಶಾಸಕರು:
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಯುವ ನಿಧಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ನಿರುದ್ಯೋಗಿ ಡಿಪ್ಲೋಮಾ ಮತ್ತು ಪದವೀಧರರನ್ನು ಕರೆದೊಯ್ಯ ಬೇಕಾಗಿದ್ದ ಶಾಸಕರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳನ್ನು ಶೃಂಗೇರಿ ವಿಧಾನಸಭಾ ಶಾಸಕರು ಯುವನಿಧಿ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದನ್ನು ಪ್ರಶ್ನೆ ಮಾಡಲು ಯಾರು ಇಲ್ಲವೆ ಎಂದು ವಿರೋಧ ಪಕ್ಷದ ಮುಖಂಡರು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ನಾಯಕರ ಆಕ್ಷೇಪ:
ಕಾಲೇಜು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿರುವುದು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಯುವನಿಧಿ ಕಾರ್ಯಕ್ರಮಕ್ಕೆ ಅದರ ಫಲಾನುಭವಿಗಳನ್ನು ಕರೆಯಿಸಬೇಕು. ಆದರೆ ಸರ್ಕಾರ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರ ಮೇಲೆ ಒತ್ತಡ ಹೇರಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆದೊಯ್ಯುತ್ತಿದೆ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಮುಖಂಡರಿಂದ ಸಮರ್ಥನೆ:
ಕಾಂಗ್ರೆಸ್ ಮುಖಂಡರು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಲು ಆರಂಭಿಸಿದ್ದಾರೆ. ಯುವ ಸಮೂಹಕ್ಕೆ ತಲುಪಬೇಕಾದ ಕಾರ್ಯಕ್ರಮವಾದ್ದರಿಂದ ಕಾಲೇಜು ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.
ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ವ್ಯಕ್ತಿಯೋರ್ವ ಮಲಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ.
ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದು, ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ ಕಾಲ ಆತಂಕ ಸೃಷ್ಟಿಸಿದ್ದಾನೆ. ವಾಹನದ ಹಾರ್ನ್ ಗೆ ಕೊನೆಗೂ ಎದ್ದ ವ್ಯಕ್ತಿ, ವಾಹನ ಹೋದ ನಂತರ ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ವ್ಯಕ್ತಿಯ ಹುಚ್ಚಾಟದಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ವ್ಯಕ್ತಿಯ ವಿರುದ್ಧ ಸೂಕ್ತ ಕಾ












