ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೂರು ವರ್ಷಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆ ಸಂಬಂಧ ಮತಗಳ ಮರು ಎಣಿಕೆಗೆ ಹಸಿರು ನಿಶಾನೆ ದೊರಕಿದೆ. ಇದರಿಂದ ಉಪ ಸಭಾಪತಿ ಸ್ಥಾನ ಅಲಂಕರಿಸಿದ್ದ ಎಂ. ಕೆ. ಪ್ರಾಣೇಶ್ ಗೆ ಈಗ ಮತ್ತೆ ಸಂಕಷ್ಟ ಎದುರಾಗಿದೆ. ಹೈ ಕೋರ್ಟ್ ಆದೇಶ ಪ್ರಶ್ನಿಸಿ ಎಂ. ಕೆ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮಾಜಿ ಸದಸ್ಯ ಗಾಯಿತ್ರಿ ಶಾಂತೇಗೌಡ ವಿರುದ್ಧ ಎಂ. ಕೆ ಪ್ರಾಣೇಶ್ ಅಲ್ಪ ಮತದಿಂದ ಆಯ್ಕೆಯಾಗಿದ್ದರು. ಈ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ಮೂರು ವರ್ಷಗಳಿಂದ ನಡೆದ ವಿಚಾರಣೆಯ ನಂತರ ಸರ್ಕಾರದ ನಾಮ ನಿರ್ದೇಶನ ಮತಗಳನ್ನು ಹೊರತು ಪಡಿಸಿ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಧಾನ ಪರಿಷತ್ ಉಪ ಸಭಾಪತಿ ಎಂ. ಕೆ. ಪ್ರಾಣೇಶ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಆದರೆ, ಸುಪ್ರೀಂ ಕೋರ್ಟ್ ಪ್ರಾಣೇಶ್ ಅರ್ಜಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಮಾರ್ಚ್ 4ರ ಒಳಗೆ ಮರು ಮತ ಏಣಿಕೆ ಮಾಡುವಂತೆ ಜಿಲ್ಲಾಡಳಿತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಇದನ್ನೂ ಓದಿ: ಒಂದೇ ಚಾರ್ಜ್ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ












