ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನಾಲ್ಕರಿಂದ ಐದು ಜನರಿಗೆ ಹುಚ್ಚು ನಾಯಿ ಕಡಿದು ಗಾಯಗೊಂಡಿರುವ ಘಟನೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಕೊಟ್ಟಿಗೆಹಾರದಲ್ಲಿ ಹುಚ್ಚು ನಾಯಿಗಳ ಕಾಟ ತೀವ್ರಗೊಂಡಿದ್ದು, ನಾಲ್ಕರಿಂದ ಐದು ಜನರಿಗೆ ಕಚ್ಚಿ ಗಾಯಗೊಂಡಿರುವ ಘಟನೆಗಳು ವರದಿಯಾಗಿವೆ. ಪಟ್ಟಣದ ವಿವಿಧ ಭಾಗಗಳಲ್ಲಿ ಹುಚ್ಚು ನಾಯಿ ಜನರ ಮೇಲೆ ದಾಳಿ ಮಾಡಿ ಭಯಭೀತಿ ಉಂಟುಮಾಡಿದ್ದು, ಕೆಲವೊಂದು ಬೀದಿ ನಾಯಿಗಳಿಗೂ ಕಚ್ಚಿರುವುದು ತಿಳಿದುಬಂದಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ
ಹುಚ್ಚು ನಾಯಿ ಕಡಿದು ಗಾಯಗೊಂಡವರು ಸ್ಥಳೀಯ ಬಣಕಲ್ ಸಾಯಿ ಕೃಷ್ಣ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಘಟನೆಗಳಿಂದ ಕೊಟ್ಟಿಗೆಹಾರ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದು, ಕೊನೆಗೆ ಹುಚ್ಚು ನಾಯಿಯನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












