ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಟಿಟಿ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ನಡೆದಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಆಗಮಿಸಿದ್ದ ಪ್ರವಾಸಿಗರು, ಹೊರನಾಡಿನಿಂದ ಬೆಂಗಳೂರಿಗೆ ವಾಪಸ್ ತೆರಳುವಾಗ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಿಗೆಖಾನ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿದೆ. ಪರಿಣಾಮ ಟಿಟಿ ವಾಹನದಲ್ಲಿದ್ದ 6 ಜನರಿಗೆ ಗಂಭೀರ ಗಾಯವಾಗಿದ್ದು, ಕಳಸ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?
ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ












