ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ವಾಹನವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ನಡೆದಿದೆ.

ಕಳಸದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ತೂಫಾನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಪೆಟ್ಟಾಗಿದ್ದು, ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಶುಕ್ರವಾರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ ಹಂತದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು. ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ ಹಾಗೂ ಮಾಜಿ ಬಜರಂಗದಳದ ಮುಖಂಡ ಖಾಂಡ್ಯ ಪ್ರವೀಣ್ ಮೇಲೆ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದವರು ಮಾಜಿ ಶಾಸಕ ಡಿ.ಎನ್ ಜೀವರಾಜ್ ಬೆಂಬಲಿಗರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ನೀವು ವಾಟ್ಸಾಪ್ ಬಳಕೆದಾರರೇ?; ವಾಟ್ಸಾಪ್ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರವೀಣ್ ಖಾಂಡ್ಯ ತಮ್ಮ ಬೆಂಬಲಿಗರೊಂದಿಗೆ ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿದ್ದರು, ಉಜ್ಜಿನಿ ಮತದಾನ ಕೇಂದ್ರದ ಬಳಿ ಭೇಟಿ ಕೊಡುತ್ತಿದ್ದ ಖಾಂಡ್ಯ ಪ್ರವೀಣ್ ಹಾಗೂ ಬೆಂಬಲಿಗರ ಮೇಲೆ ಏಕಾಏಕಿ ರಘು ಮತ್ತು ತಂಡದವರು ಹಿಂಬದಿಯಿಂದ ತಲೆಗೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ: ಈ ಯೋಜನೆಯಲ್ಲಿ ಸಿಗಲಿದೆ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್.ಜೀವರಾಜ್ ಬೆಂಬಲಿಗರಾದ ವೆನಿಲ್ಲ ಭಾಸ್ಕರ್, ಅರುಣ್ ಸೇರಿದಂತೆ ಕೆಲ ಮಂದಿ ತನ್ನ ಮೇಲೆ ರಾಡ್ ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಘಟನೆಯಲ್ಲಿ ಪ್ರವೀಣ್ ತಲೆಗೆ ತೀವ್ರ ಗಾಯವಾಗಿದೆ.
ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಪ್ರವೀಣ್ ಖಾಂಡ್ಯ, ಕ್ಷೇತ್ರದಲ್ಲಿ ಬ್ರಾಹ್ಮಣ ಸಮುದಾಯದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ತಾನೂ ಬ್ರಾಹ್ಮಣ ಸಮುದಾಯದವನಾಗಿದ್ದೇನೆ. ಕ್ಷೇತ್ರದಲ್ಲಿ ತನ್ನ ಏಳಿಗೆ ಸಹಿಸದ ಜೀವರಾಜ್ ತನ್ನ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಭರ್ಜರಿ ಜಾಬ್ ಆಫರ್; PUC ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ












