
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಇರಾನ್‌ನ ಹಡಗು ಕಂಪನಿಯಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣಪತಿಕಟ್ಟೆಯ ಜಿ.ಎಂ.ನಿಶ್ಚಿತ್ ಸುರಕ್ಷಿತನಾಗಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್‌ಶಿಪ್; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಇರಾನ್ ಯುದ್ಧ ಆರಂಭಗೊಂಡ ಬಳಿಕ ಆತ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ಪೋಷಕರು ಆತಂಕಕ್ಕೊಳಗಾಗಿ ಸರಕಾರದ ನೆರವು ಕೋರಿದ್ದರು. ಈ ವಿಚಾರವನ್ನು ಮಾಧ್ಯಮಗಳ ಮೂಲಕ ತಿಳಿದು ಯುವಕನ ಪತ್ತೆಗೆ ಕಾರ್ಯ ಪ್ರವೃತ್ತರಾದ ಅನಿವಾಸಿ ಭಾರತೀಯ ಸಮಿತಿಯ ಮಾಜಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪರ್ಕಿಸಿದ್ದು, ಯುವಕ ಸುರಕ್ಷಿತವಾಗಿರುವುದನ್ನು ಖಚಿತ ಪಡಿಸಿದ್ದಾರೆ.

ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ
ಸದ್ಯ ನಿಶ್ಚಿತ್ ಇರಾನ್‌ನಲ್ಲಿ ಸುರಕ್ಷಿತವಾಗಿದ್ದಾನೆಂಬ ಖಚಿತ ಮಾಹಿತಿ ಲಭ್ಯವಾಗಿದ್ದು, ಈ ವಿಚಾರ ತಿಳಿದ ನಿಶ್ಷಿತ್ ಪೋಷಕರು ನಿಟ್ಟುಸಿರುವ ಬಿಟ್ಟಿದ್ದಾರೆ.













