
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಹ್ಯಾಂಡ್ ಪೋಸ್ಟ್ ಬೆಟ್ಟಗೆರೆ ಮಾರ್ಟ್ ಪಕ್ಕದಲ್ಲಿರುವ ಹಾಲಿನ ಡೈರಿಯಲ್ಲಿ ಕಳ್ಳನ ಕೈ ಚಳಕ ತೋರಿದ್ದು, ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ ಬೆನ್ನು ಹತ್ತಿದ ಪೊಲೀಸರು ಅಸ್ಸಾಂ ಮೂಲದ ರೆಹಮಾನ್ (32) ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಬೈದುವಳ್ಳಿ ಕ್ರಾಸ್ ಬಳಿ ಅಜಿತ್ ಎಂಬುವರಿಗೆ ಸೇರಿದ ಹಾಲಿನ ಡೈರಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದು, ಖದೀಮನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ಮೂಲದ ರೆಹಮಾನ್ ಹಾನುಬಾಳು ಕಾಫಿ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸುಮಾರು 6000 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂಬುದಾಗಿ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ, ಕ್ರೈಂ ವಿಭಾಗದ ಸಚಿನ್ ಮಹೇಂದ್ರ ಸೇರಿದಂತೆ ಸಿಬ್ಬಂದಿಗಳು ಇದ್ದರು.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ













