
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಭಗವಾನ್ ಮೆಡಿಕಲ್ ಅಂಗಡಿಯಲ್ಲಿ ಇಂದು ಸುಮಾರು ಬೆಳಿಗ್ಗೆ 4:30 ವೇಳೆ ಕಳ್ಳತನ ನಡೆದಿದ್ದು, ಸುಮಾರು ₹2 ಲಕ್ಷ ನಗದು ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ.
ಅಂಗಡಿಯ ಕ್ಯಾಶ್ ಕೌಂಟರ್ನಲ್ಲಿದ್ದ ಸುಮಾರು ₹2 ಲಕ್ಷ ನಗದನ್ನು ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಅಂಗಡಿ ಮಾಲೀಕರು ಅಂಗಡಿಯನ್ನು ತೆರೆಯಲು ಬಂದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಫಾರೆನ್ಸಿಕ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ.















