ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಕೊಪ್ಪದ ಜನತೆ ಹೈರಾಣಾಗಿದ್ದಾರೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಹೌದು, ಪಟ್ಟಣದಲ್ಲಿ ನಿನ್ನೆ ಹೈಸ್ಕೂಲ್ ವಿದ್ಯಾರ್ಥಿಯ ಕಾಲಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದೆ. ಇದರಿಂದ ರಸ್ತೆಯಲ್ಲಿ ಓಡಾಡಲು ವಿದ್ಯಾರ್ಥಿಗಳು ಸಾರ್ವಜನಿಕರು ಭಯಪಡುವಂತಾಗಿದೆ.
ಎರಡು ವಾರದ ಹಿಂದೆ ಇಬ್ಬರ ಮೇಲೆ ಹುಚ್ಚು ನಾಯಿ ದಾಳಿ:
ಹೌದು, ಡಿ.4 ರಂದು ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎನ್ನುವವರ ಮೇಲೆ ಏಕಾಏಕಿ ಹುಚ್ಚು ನಾಯಿ ದಾಳಿ ಮಾಡಿತ್ತು. ಜೊತೆಗೆ ವಿವೇಕಾನಂದ ರಸ್ತೆಯಲ್ಲಿ ಮೂರು ವರ್ಷದ ಮಗುವಿನ ಮೇಲೆ ಕೂಡ ದಾಳಿ ಮಾಡಿತ್ತು. ಇದರಿಂದ ಹುಚ್ಚು ನಾಯಿ ದಾಳಿಗೊಳಗಾದ ಮಹೇಶ್ ಅವರು ಕೊಪ್ಪ ಪಟ್ಟಣ ಪಂಚಾಯಿತಿಗೆ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಹುಚ್ಚು ನಾಯಿಗಳ ಹಾವಳಿ ತಡೆಯಲು ವಿಫಲವಾದ ಪಟ್ಟಣ ಪಂಚಾಯಿತಿ:
ಪಟ್ಟಣದಲ್ಲಿ ಮಹಿಳೆಯರು, ಶಾಲಾ ಮಕ್ಕಳು, ವಯೋವೃದ್ಧರು ಒಬ್ಬಂಟಿಯಾಗಿ ಓಡಾಡಲು ಹೆದರುವಂತಾಗಿದೆ. ಕೆಲವೊಮ್ಮೆ ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡೇ ಸವಾರಿಸಬೇಕಾದ ಅನಿವಾರ್ಯತೆ ಇದೆ. ಹುಚ್ಚು ನಾಯಿಗಳ ನಿಯಂತ್ರಣ ಮಾಡಬೇಕಾದ ಪಟ್ಟಣ ಪಂಚಾಯಿತಿ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಮೌನ ವಹಿಸಿರುವುದಕ್ಕೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಅನಾಹುತ ಸಂಭವಿಸುವ ಮುನ್ನವೇ ಸೂಕ್ತ ಮುಂಜಾಗೃತ ಕ್ರಮಕೈಗೊಳ್ಳಬೇಕಿದೆ.
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ












