ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರಿನಲ್ಲಿ ತೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶೃಂಗೇರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಒಂದು ದಿನದ ವಿದ್ಯುತ್ ನಿಲುಗಡೆ ಆಗಲಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

26.12.2025 ರ ಶುಕ್ರವಾರ ದಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಾಳೆಹೊನ್ನೂರಿನಲ್ಲಿ ತೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶೃಂಗೇರಿ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ನಿಲುಗಡೆ ಆಗುತ್ತದೆ. ಹೀಗಾಗಿ ಶೃಂಗೇರಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












