ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕೊಪ್ಪ ತಾಲ್ಲೂಕಿನ ಹರಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶಮಿತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈ ಸಾವಿನ ಸಮಗ್ರ ಹಾಗೂ ನ್ಯಾಯಯುತ ತನಿಖೆಯಾಗಬೇಕು ಎಂದು ಕೊಪ್ಪ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡದಲ್ಲಿ 2500 ಹುದ್ದೆಗೆ ಅರ್ಜಿ ಆಹ್ವಾನ; ಈ ದಾಖಲೆ ಕಡ್ಡಾಯ

ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ಅಮೂಲ್ಯ ಅನುಮಾಸ್ಪದವಾಗಿ ಮೃತಪಟ್ಟಿದ್ದು, ಈ ಧುರ್ಘಟನೆ ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಶಾಸಕರಾದ ಟಿ.ಡಿ ರಾಜೇಗೌಡರವರ ಅಧ್ಯಕ್ಷತೆಯಲ್ಲಿ ಪೋಷಕರು ಹಾಗೂ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಸಭೆಯನ್ನು ಕರೆದು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಕಾನೂನುಬದ್ದ ತನಿಖೆಯನ್ನು ಮಾಡಲು ಆದೇಶಿಸಿ ಹಾಗೂ ಅದೇ ದಿನ ಕೊಪ್ಪ ತಾಲ್ಲೂಕಿನ ಪ್ರಗತಿಪರ ಸಂಘಟನೆಗಳ ಪ್ರತಿಭಟನೆಯ ಮನವಿಯನ್ನು ಸ್ವೀಕರಿಸಿ, ನಿರ್ಲಕ್ಷ ತೋರಿದ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ಇವರನ್ನು ಈಗಾಗಲೇ ಅಮಾನತ್ತುಗೊಳಿಸಿದ್ದಾರೆ.
ಇದನ್ನೂ ಓದಿ: ಮನೆ ಕಟ್ಟುವವರಿಗೆ ಕೇಂದ್ರದಿಂದ ಸಿಗಲಿದೆ ಹಣಕಾಸಿನ ಸಹಾಯ; ಇಲ್ಲಿದೆ ಸಂಪೂರ್ಣ ಮಾಹಿತಿ
ಅದೇ ರೀತಿ ಉಳಿದ ಸಿಬ್ಬಂದಿಗಳನ್ನು ಕೂಡ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಈ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ನಿವೃತ್ತ ಜಿಲ್ಲಾ ನ್ಯಾಯಧೀಶರಾದ ಶ್ರೀಮತಿ ಶೋಭಾ ಎಸ್ ರವರ ನೇತೃತ್ವದಲ್ಲಿ ತನಿಖೆ ನಡೆಸಲು ಕ್ರೈಸ್ ಸಂಸ್ಥೆಯಿಂದ ಆದೇಶಿಸಲಾಗಿದೆ. ಹಾಗೂ ಪೊಲೀಸ್ ಇಲಾಖೆಯಿಂದಲೂ ಕೂಡ ಉನ್ನತ ಮಟ್ಟದ ತನಿಖೆಯನ್ನು ಈಗಾಗಲೇ ಕೈಗೊಳ್ಳಲಾಗಿರುತ್ತದೆ.
ಕಾಂಗ್ರೆಸ್ ಪಕ್ಷವು ಮೃತ ಮಗುವಿನ ಅನುಮಾನಾಸ್ಪದ ಸಾವಿಗೆ ನ್ಯಾಯ ಕೊಡಿಸಲು ಸದಾ ಬದ್ಧವಾಗಿರುತ್ತದೆ. ಈ ಬಗ್ಗೆ ಯಾವುದೇ ಹೋರಾಟಕ್ಕೂ ಕಾಂಗ್ರೆಸ್ ಪಕ್ಷ ಸಿದ್ದವಿದ್ದು, ಈ ಸಾವಿನಲ್ಲಿ ಯಾವುದೇ ದುರುದ್ದೇಶದ ರಾಜಕೀಯ ಮಾಡದೇ ಪಕ್ಷತೀತವಾಗಿ ನ್ಯಾಯ ಕೊಡಿಸಲು ಪ್ರಾಮಾಣಿಕ ಹೋರಾಟ ಮಾಡೋಣ ಎಂದರು.
ಇದನ್ನೂ ಓದಿ: ಈ ಕಾರ್ಡ್ ಮಾಡಿಸಿ ಪ್ರತಿ ತಿಂಗಳು 1200 ಪಡೆಯಿರಿ; ಸರ್ಕಾರದಿಂದ ಬಂಪರ್ ಸೌಲಭ್ಯ












