ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2026-27ನೇ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬಾಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರ, ಶೃಂಗೇರಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೊಮ್ಮುವ ಎಲ್ಲಾ ನಗರ ಮತ್ತು ಗ್ರಾಮೀಣ ಫೀಡರ್ಗಳಿಗೆ ನಾಳೆ (ಮೇ 22 ಶುಕ್ರವಾರ) ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.













