ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೆಸವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲಕುಳಿ ನಿವಾಸಿ ಆದರ್ಶ ಅವರ ಮನೆಯಲ್ಲಿ ಬುಧವಾರ (7-1-2026) ದಂದು ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಮನೆಯವರು ಹೊರಗಿದ್ದ ಸಮಯದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಕಳ್ಳತನ ನಡೆಸಿದ್ದು, ಸುಮಾರು 80 ಗ್ರಾಂ ಚಿನ್ನಾಭರಣಗಳು ಕಳವಾಗಿವೆ ಎಂದು ತಿಳಿದುಬಂದಿದೆ. ಕಳ್ಳತನ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ












