ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ತಿಮ್ಮನ ಮೊಟ್ಟೆಗಳು’ ಸಿನಿಮಾ ಜೂನ್ 27ಕ್ಕೆ ಅಂದರೆ ನಾಳೆ ರಾಜ್ಯದಾದ್ಯಂತ ತೆರೆಕಾಣುತ್ತಿದೆ.
ಇದನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಇತ್ತೀಚೆಗೆ ಚಿತ್ರತಂಡ ವಾಸುಕಿ ವೈಭವ್ ಹಾಡಿರುವ ಕಾಡು ದಾರಿ ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿತ್ತು , ಶ್ರೀಕೃಷ್ಣ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ನಿರ್ಮಾಪಕರು.
ರಕ್ಷಿತ್ ತೀರ್ಥಹಳ್ಳಿಯವರೇ ಬರೆದ ಕಾಡಿನ ನೆಂಟರು ಕಥಾ ಸಂಕಲನದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಇದು ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮ ಕಥೆಯಾಗಿದೆ.
ಅಮೆರಿಕಾದ ಡಲ್ಲಾಸ್‌ನಲ್ಲಿ ಯೋನಿ ಪ್ರಿಮೀಯರ್ ಶೋ ಮಾಡಿದ ಚಿತ್ರತಂಡಕ್ಕೆ ಉತ್ತಮ ಅಭಿಪ್ರಾಯಗಳು ದೊರಕಿತ್ತು. ಕಾಳಿಂಗ ಹಾವು ಚಿತ್ರದ ಕಥಾವಸ್ತುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಮಾನವ ಮತ್ತು ಪ್ರಾಣಿ ಸಂಬಂಧದ ಸಣ್ಣ ಎಳೆ ಸುತ್ತ ಈ ಸಿನಿಮಾ ಸಾಗಿದೆ.
ಇದನ್ನೂ ಓದಿ: PUC ಪಾಸ್ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್ ಶಿಪ್; ನೇರ ನಿಮ್ಮ ಖಾತೆಗೆ ಜಮಾ!
ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಚಿತ್ರ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.
ಈ ಚಿತ್ರದ ಪ್ರಮುಖ ಪಾತ್ರವರ್ಗದಲ್ಲಿ ಕೇಶವ್ ಗುತ್ತಳಿಕೆ, ಶೃಂಗೇರಿ ರಾಮಣ್ಣ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ, ಪ್ರಾಣೇಶ್ ಕೂಳೆಗದ್ದೆ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ ಮುಂತಾದವರಿದ್ದಾರೆ.
ಚಿತ್ರಕ್ಕೆ ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿ.ಎಸ್ ಅವರ ಸಂಕಲನ ಹಾಗೂ ಹೇಮಂತ್ ಜೋಯಿಸ್ ಅವರ ಸಂಗೀತವಿದೆ













