ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹಿಟ್ ಆ್ಯಂಟ್ ರನ್ ಗೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳಲು ಕೊಪ್ಪದ ಬಳಿ ನಡೆದಿದೆ. ನರಸಿಂಹ (45) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್ನ್ಯೂಸ್: ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ತೀರ್ಥಹಳ್ಳಿ ನಾಲೂರು ಬಳಿಯ ಗಾರ್ಡರಗದ್ದೆ ನಿವಾಸಿ ನರಸಿಂಹರವರು ಬಿಳಲುಕೊಪ್ಪದ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭಿರವಾಗಿ ಗಾಯಗೊಂಡಿದ್ದ ನರಸಿಂಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತದೇಹ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ನಿಂದ 30 ದಿನದ ಉಚಿತ ಹೊಲಿಗೆ ತರಬೇತಿ; ಡಿಟೇಲ್ಸ್ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ














