ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹೆಂಡದಲ್ಲಿ ತೇಲಿಸುತ್ತಿದೆ: ಆರಗ ಜ್ಞಾನೇಂದ್ರ

ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಹೆಂಡ ತುಂಬಿಕೊಂಡು ಬಂದು ಮನೆಗಳಿಗೆ ಹೆಂಡ ಸರಬರಾಜು ಮಾಡಲಾಗುತ್ತಿದೆ. ಅಬಕಾರಿ ಇಲಾಖೆ, ಪೋಲೀಸ್ ಇಲಾಖೆ ರಾಜ್ಯದಲ್ಲಿ ಇದೆಯೇ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಧಾನ ಸಭೆ ಅಧಿವೇಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

 

ಇದನ್ನೂ ಓದಿ; KOF ನಲ್ಲಿ ನೇಮಕಾತಿಗಾಗಿ; ಲೆಕ್ಕಪರಿಶೋಧಕರ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಆಡಳಿತದಲ್ಲಿ ಅಕ್ರಮ ಮದ್ಯಮಾರಾಟ ಹೆಚ್ಚಾಗಿದ್ದು, ಹಳ್ಳಿಗಳ ಕೌಟುಂಬಿಕ- ಆರ್ಥಿಕ ವ್ಯವಸ್ಥೆ ಹಾಳಾಗುತ್ತಿದೆ. ಚಕ್ಕುಲಿ, ಕೋಡುಬಳೆ, ಮೀನು ಮಾರಿದಂತೆ ಹೆಂಡ ಸೇಲ್ ಮಾಡಲಾಗುತ್ತಿದೆ. ಹೆಂಡ ತುಂಬಿಕೊಂಡು ಬಂದು ಹಳ್ಳಿಗಳ ಗೂಡಂಗಡಿ, ಮನೆಗಳಿಗೆ ಸರಬರಾಜು ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹೆಂಡದಲ್ಲಿ ತೇಲಿಸುತ್ತಿದೆ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಧಾನ ಸಭೆ ಅಧಿವೇಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ; ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್‌; ಕೆಲವೇ ತಿಂಗಳಲ್ಲಿ ಕೇಬಲ್ ಸೇತುವೆ ಸಿದ್ದ

ಆರಗ ಜ್ಞಾನೇಂದ್ರ ಅವರ ಮಾತಿಗೆ ಪ್ರತಿಕ್ರಿಯಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಅಕ್ರಮಗಳಿಗೆ ಹಳ್ಳಿಯ ವ್ಯಾಪಾರಿಗಳನ್ನು ಹೊಣೆ ಮಾಡುವುದಕ್ಕಿಂತ ಅಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಹೊಣೆ ಮಾಡಬೇಕು ಎಂದರು.

 

ಕೊಪ್ಪ: ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರದ ಶ್ರೀ ಮಠದ ಆವರಣದಲ್ಲಿ ಫೆಬ್ರವರಿ 25 ಭಾನುವಾರದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ ಆಯೋಜಿಸಲಾಗಿದೆ ಎಂದು ಕೊಪ್ಪ ಸರ್ಕಾರಿ ಆಸ್ಪತ್ರೆಯ ದಂತ ಆರೋಗ್ಯ ಅಧಿಕಾರಿ ಡಾ. ಗಾನವಿ ತಿಳಿಸಿದ್ದಾರೆ.

 

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಸಂಪೂರ್ಣ ದಂತ ಪಂಕ್ತಿ ಕಳೆದುಕೊಂಡಿರುವ 45 ವರ್ಷ ಮೇಲ್ಪಟ್ಟ ಬಿಪಿಎಲ್ ಕಾಡುದಾರರ ಫಲಾನುಭವಿಗಳಿಗೆ ಉಚಿತ ದಂತ ಪಂಕ್ತಿ ಜೋಡಣೆಯನ್ನು ಮಾಡಲಾಗುವುದು. ಶಿಬಿರದಲ್ಲಿ 50 ಕ್ಕೂ ಹೆಚ್ಚು ನುರಿತ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಗಳು ಭಾಗವಹಿಸಲಿದ್ದು, ಜಿಲ್ಲೆಯ ನಾಗರೀಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, ಒರಲ್ ಹೆಲ್ತ್ ಪಾಲಿಸಿ ಮತ್ತು ದಂತ ಆರೋಗ್ಯ ಚಿಕ್ಕಮಗಳೂರು ಇವರು ತಿಳಿಸಿದ್ದಾರೆ.

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಫಲಾನುಭವಿಗಳು ಫೆಬ್ರವರಿ 17 ರ ಒಳಗಾಗಿ ತಮ್ಮ ತಾಲೂಕಿನ ಸರ್ಕಾರಿ ಆಸ್ಪತ್ರೆಯ ದಂತ ಆರೋಗ್ಯ ಅಧಿಕಾರಿಗಳನ್ನು ಭೇಟಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಮೊದಲು ಬಂದ ಐವತ್ತು ಜನರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.