ವೈಭವದ ಎಳ್ಳಮಾವಾಸ್ಯೆ ಜಾತ್ರೆಗೆ ತೆಪ್ಪೋತ್ಸವದ ಮೂಲಕ ತೆರೆ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಶ್ರೀರಾಮೇಶ್ವರ ದೇವರ ಸಡಗರ ಸಂಭ್ರಮದಿಂದ ತೆಪ್ಪೋತ್ಸವ ಮುಕ್ತಾಯಗೊಂಡಿತು. ಇದರೊಂದಿಗೆ ವೈಭವದ ಎಳ್ಳಮಾವಾಸ್ಯೆ ಜಾತ್ರೆಗೆ ತೆರೆ ಬಿದ್ದಿತ್ತು. ಶನಿವಾರ ಬೆಳಿಗ್ಗೆ ಶ್ರೀರಾಮೇಶ್ವರ ದೇವರ ಓಕಳಿ ಸ್ನಾನ, ಸಂಜೆ ಶ್ರೀದೇವರ ಪಲ್ಲಕ್ಕಿ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿ ಇರಿಸಿ ತುಂಗಾನದಿಯಲ್ಲಿ ಪಲ್ಲಕ್ಕಿ ಉತ್ಸವ ನಡೆಸಲಾಯಿತು.

 

ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ

ಈ ವರ್ಷ ತೆಪ್ಪೋತ್ಸವದಲ್ಲಿ ವಿಶೇಷ ಆಕರ್ಷಣೆಯಾಗಿ ಅತೀ ಸುಂದರವಾದ ತೆಪ್ಪ ನಿರ್ಮಾಣ ಮಾಡಲಾಗಿತ್ತು. ಜೊತೆಗೆ ವಿಶೇಷ ಆಕರ್ಷಣೆಯಾಗಿ ನೂರಾರು ಬೆಳಕಿನ ದೀಪಗಳನ್ನು ಆಕಾಶದಲ್ಲಿ ಹಾರಿಬಿಡಲಾಯಿತು. 50,000 ಕ್ಕೂ ಹೆಚ್ಚು ಜನರು ಸಿಡಿಮದ್ದು ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದರು. ಆಕರ್ಷಕವಾದ ವಿದ್ಯುತ್ ದೀಪಾಲಂಕಾರದಿಂದ ಕಣ್ಮನ ಸೆಳೆಯುತ್ತಿದ್ದ ಅಯೋಧ್ಯೆಯ ರಾಮಮಂದಿರ, ಕಮಾನು ಸೇತುವೆ ನೆರದಿದ್ದ ಲಕ್ಷಾಂತರ ಜನರಿಗೆ ಸಂತಸ ಕೊಟ್ಟಿತ್ತು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?

ಇನ್ನು ಎಳ್ಳಮಾವಾಸ್ಯೆ ಜಾತ್ರೆಯಲ್ಲಿ ಹಲವು ಕಳವು ಪ್ರಕರಣಗಳು ವರದಿಯಾಗುತ್ತಿದ್ದವು. ಅಲ್ಲದೇ ನೂಕುನುಗ್ಗಲು ಏರ್ಪಟ್ಟು ಜನರ ನಡುವೆ ಘರ್ಷಣೆಗಳು ಸಂಭವಿಸುತ್ತಿದ್ದವು. ಆದರೆ ಈ ಭಾರೀ ಅಂತಹ ಯಾವುದೇ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿತ್ತು. ಆದರೆ ಅಪಾಯಕಾರಿ ಸಿಡಿಮದ್ದು ಪ್ರದರ್ಶನದಲ್ಲಿ ತಕರಾರು ಎತ್ತಬೇಕಿದ್ದ ಅರಣ್ಯ, ಭೂ ವಿಜ್ಞಾನ ಇಲಾಖೆ ಮೌನ ವಹಿಸಿದ್ದು ಅಚ್ಚರಿ ಸಂಗತಿ ಆಗಿತ್ತು.

 

ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿ ಪೂರ್ಣೇಶ್ ಆಸ್ಪತ್ರೆಯಿಂದ ಎಸ್ಕೇಪ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯೊಬ್ಬ ಎಸ್ಕೇಪ್ ಆಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದ ಪೂರ್ಣೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ಆರೋಪಿ.

 

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಈತನ ಮೇಲೆ 4 ಹಾಫ್ ಮರ್ಡರ್, 3 ಅಸಾಲ್ಟ್, ಪೊಲೀಸ್ ಮೇಲೆ ಅಟ್ಯಾಕ್ ಸೇರಿದಂತೆ 9 ಕೇಸ್ ಗಳಿವೆ. 307 ಕೇಸ್ ನಲ್ಲಿ ವಾರಂಟ್ ಇಶ್ಯು ಆಗಿತ್ತು. ಆದರೆ, ಕಾಡಿನ ಮರಗಳ ಮೇಲೆ ಮಲಗಿ ಪೊಲೀಸರ ಕೈಗೆ ಸಿಗದೆ ಆಟ ಆಡಿಸುತ್ತಿದ್ದ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು

ಕಳೆದ ನವೆಂಬರ್ ನಲ್ಲಿ ಮನೆಯಲ್ಲಿರೋ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ ಲಾಂಗ್ ಬೀಸಿದ, ಆತನ ಕಾಲಿನ ಮಂಡಿಗೆ ಫೈರಿಂಗ್ ಮಾಡಿದ್ದರು. ಫೈರಿಂಗ್ ವೇಳೆ ಪೂರ್ಣೇಶ್ ಬಲಗಾಲಿಗೆ ಗುಂಡು ತಗಲಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ನಗರದ ಮಲ್ಲೇಗೌಡ ಆಸ್ಪತ್ರೆಯಿಂದ ಮುಂಜಾನೆ ಎಸ್ಕೇಪ್ ಆಗಿದ್ದು, ಆರೋಪಿಯ ಪತ್ತೆಗೆ ಪೊಲೀಸರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.