ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ಕಾಮಾನು ಸೇತುವೆಯ ಕೆಳ ಭಾಗದಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ತುಂಗಾ ಕಾಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಇಂದು ಮಂಗಳವಾರ ಅಸ್ತಿ ಪಂಜರವೊಂದು ಪತ್ತೆಯಾಗಿದ್ದು, ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!
ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು, ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರೆ ಎಂಬುದನ್ನು ಕಂಡು ಹಿಡಿಯಬೇಕಿದ್ದು, ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್














