ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಚಿಟ್ ಫಂಡ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಹೊಸಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗರಾಜ್ (52) ಮೃತ ದುರ್ದೈವಿ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಸಂಬಂಧಿಕರೊಬ್ಬರಿಗೆ ತಮ್ಮ ಮನೆಯ ದಾಖಲೆ ಪತ್ರಗಳನ್ನು ಕೊಟ್ಟು ಚಿಟ್ ಫಂಡ್ ನಿಂದ ಸಾಲ ಕೊಡಿಸಿದ್ದರು. ಸಂಬಂಧಿ ಸಾಲ ಮರುಪಾವತಿ ಮಾಡದ ಕಾರಣಕ್ಕೆ ಚಿಟ್ ಫಂಡ್ ಸಿಬ್ಬಂದಿ ನಾಗರಾಜ್ ಅವರಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ನಾಗರಾಜ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತೀರ್ಥಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












