ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹೋಟೆಲ್ ಉದ್ಯಮಿ ಓರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲಿನಲ್ಲಿ ನಡೆದಿದೆ. ಮಿಥುನ್ (34) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೋಟೆಲ್ ಉದ್ಯಮಿ.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…

ತೀರ್ಥಹಳ್ಳಿಯ ಎಸ್.ಬಿ.ಐ ಬ್ಯಾಂಕ್ ಬಳಿ ಪಾಲುದಾರಿಕೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಮಿಥುನ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಲತಃ ತೀರ್ಥಹಳ್ಳಿ ತಾಲೂಕು ಹಂಡಿಗೆ ಮೂಲದವರು. ಪತ್ನಿ ಮತ್ತು 8 ತಿಂಗಳ ಮಗು ಜೊತೆ ಬಾಳೆಬೈಲಿನಲ್ಲಿ ವಾಸವಾಗಿದ್ದರು.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಇನ್ನು ಈ ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ












