ಭಂಡಿಗಡಿಯ ಹೆಗ್ಗೆರೆ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹೆಗ್ಗೆರೆ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ ನಡೆದಿದೆ.


ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಸ್ಥಳೀಯರು ಗಮನಿಸಿದಂತೆ, ಕೆರೆಯ ವಿವಿಧ ಭಾಗಗಳಲ್ಲಿ ಮೀನಿನ ಶವಗಳು ತೇಲುತ್ತಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪರಿಸರ ಮಾಲಿನ್ಯ ಅಥವಾ ನೀರಿನ ಗುಣಮಟ್ಟ ಹದಗೆಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆಗಳು ವ್ಯಕ್ತವಾಗಿವೆ. ಇದರಿಂದ ಮೀನುಗಳ ಸಾವಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಇನ್ನೊಂದೆಡೆ, ಕೆಲವರು ವಿಷಕಾರಿ ಪದಾರ್ಥಗಳನ್ನು ಕೆರೆಯಲ್ಲಿ ಬಿಡಲಾಗಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಹಿನ್ನೆಲೆ ಜಾನುವಾರುಗಳು ಕೆರೆಯ ನೀರು ಕುಡಿಯದಂತೆ ಜಾಗರೂಕತೆ ವಹಿಸುವುದು ಅಥವಾ ಇತರ ಬಳಕೆಗಳಿಗೆ ಬಳಸದಂತೆ ಜಾಗರೂಕತೆ ವಹಿಸಬೇಕಿದೆ. (ವರದಿ- ಅಖಿಲೇಶ್‌ ಕೊಪ್ಪ)


ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.