ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕಾಫಿ ತೋಟದಲ್ಲಿ ಹಸುವನ್ನು ಕದ್ದು ಹತ್ಯೆಗೈದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರದ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಅನ್ವರ್ ಅಲಿ, ಐನಲ್ಹಕ್, ಮುಜಾಮಿಲ್ ಬಂಧಿತ ಆರೋಪಿಗಳು.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್ಟೇಟ್ ಒಂದರ ಕಾಫಿ ತೋಟದಲ್ಲಿ ಭಾನುವಾರ ಸಂಜೆ ಗೋಹತ್ಯೆ ನಡೆದಿರುವ ಮಾಹಿತಿ ಪಡೆದ ಬಾಳೆಹೊನ್ನೂರು ಪೊಲೀಸರು, ಎಸ್ಐ ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ದನದ ಮಾಂಸವನ್ನ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












