ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಕಡೂರು ವಲಯ ಹಿರೇನಲ್ಲೂರು ಕಲ್ಲೇನಹಳ್ಳಿ ಗ್ರಾಮದ ಸರ್ವೇ ನಂ. 11ರಲ್ಲಿ ಒಂದೂವರೆ ಅಥವಾ ಎರಡು ವರ್ಷ ಪ್ರಾಯದ 3 ಕೃಷ್ಣಮೃಗಗಳನ್ನು (2 ಹೆಣ್ಣು, 1 ಗಂಡು) ಬೇಟೆಗಾರರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಬಾಸೂರು ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕೃತ್ಯ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತುರಾತುರಿಯಲ್ಲಿ ಮಂಗಳವಾರ ಸಂಜೆ ಮೃತ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ವನ್ಯಜೀವಿ ವೈದ್ಯರು ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ. ಸರಕಾರೇತರ ಸಂಸ್ಥೆಯ ಹಲವು ವ್ಯಕ್ತಿಗಳನ್ನು ಮಾತ್ರ ಕೃಷ್ಣಮೃಗ ಮರಣೋತ್ತರ ಪರೀಕ್ಷೆಗೆ ಕರೆದುಕೊಂಡು ಹೋಗಿರುವುದು ಅನುಮಾನ ಮೂಡಿಸಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












