ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೂರು ವರ್ಷಗಳ ಹಿಂದೆ ನಡೆದಿದ್ದ 8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣವೊಂದರಲ್ಲಿ ಆರೋಪಿತರಾಗಿದ್ದ ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ ಮೂಲದ ಜಯಸಿಂಗ್ (21), ಮುಖೇಶ್ ಸಿಂಗ್ (20), ಮನೀಶ್ ತಿರ್ಕಿಗೆ ಮಂಗಳೂರಿನ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ

ಆರೋಪಿಯು ನವೆಂಬರ್ 21, 2021 ರಂದು ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ; ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಈ ದಾಖಲೆಗಳು ಕಡ್ಡಾಯ
ಈ ಘಟನೆ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಬಿಹಾರ, ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದರು. ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ; ಸ್ಕಾಲರ್ ಶಿಪ್ ಜೊತೆ ಸಿಗಲಿದೆ ಈ ಸೌಲಭ್ಯ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ












