ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಧರೆ ಕುಸಿದು ಮೂರು ಹಸುಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು ಮನೆಗೂ ಹಾನಿ ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: 60% ಅಂಕ ಪಡೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್

ಮಾಗೋಡಿನ ಶಂಕರಪ್ಪಗೌಡರ ಮನೆ ಸಮೀಪದ ಧರೆ ಕುಸಿದು ಮೂರು ಹಸುಗಳು ಸ್ಥಳದಲ್ಲಿ ಮೃತಪಟ್ಟಿದ್ದು ಮನೆಗೂ ಹಾನಿ ಸಂಭವಿಸಿದೆ. ಭಾನುವಾರ ಘಟನೆ ಸಂಭವಿಸಿದೆ. ಭಾರಿ ಪ್ರಮಾಣದ ಮಣ್ಣು ಕೊಟ್ಟಿಗೆ ಮೇಲೆ ಬಿದ್ದು ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳು, ನಾಯಿ, ಕೋಳಿ ಮತ್ತು ಬೆಕ್ಕು ಸ್ಥಳದಲ್ಲಿ ಮೃತಪಟ್ಟಿವೆ. ಮನೆಯ ಗೋಡೆ, ಮೇಲ್ಲಾವಣಿಯೂ ಕುಸಿದಿದೆ.
ಆದರೆ, ಇನ್ನೂ ಕೂಡ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಎಚ್ಚರಿಕೆ; ಪಿಎಂ ಕಿಸಾನ್ ಹಣ 110 ಕೋಟಿ ವಂಚನೆ!












