ಕಳಸ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಕೆಳಬೈಲ್ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೃಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ಈ ಬಗ್ಗೆ ಅರಿವಿಲ್ಲದೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಮೂರು ಹಸುಗಳು ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿವೆ.
ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಮೂರು ಹಸುಗಳಿಗೂ ತೀವ್ರ ವಿದ್ಯುತ್ ಆಘಾತ ಉಂಟಾಗಿ ಅವು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ.
ಕಳಸ: ವಿದ್ಯುತ್ ತಂತಿ ಸ್ಪರ್ಶಿಸಿ ಮೂರು ಹಸುಗಳು ಸ್ಥಳದಲ್ಲೇ ಸಾವು













