ಭೀಕರ ಬೈಕ್ ಅಪಘಾತಕ್ಕೆ ಮೂವರು ಬಲಿ

ಕುಶಾಲನಗರ: (ನ್ಯೂಸ್ ಮಲ್ನಾಡ್ ವರದಿ) ಸಮೀಪದ ನಂಜರಾಯಪಟ್ಟಣ ಮಸೀದಿ ತಿರುವಿನಲ್ಲಿ ಭಾನುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ವಿರುಪಾಕ್ಷಪುರದ ಹರೀಶ ಅವರು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಒಟ್ಟು ಮೂವರು ಮೃತಪಟ್ಟಿದ್ದು, ಘಟನೆಯಿಂದ ಮೃತರ ಕುಟುಂಬಗಳಲ್ಲಿ ದುಃಖ ಮಡುಗಟ್ಟಿದೆ.

ಮೃತರ ಕುಟುಂಬಗಳಿಗೆ ಸಾಂತ್ವನ ಹೇಳುವ ನಿಟ್ಟಿನಲ್ಲಿ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರರ ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.