ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು.
ನಡೆದಿದ್ದೇನು?
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿತ್ತು. ಈ ವೇಳೆ ಗುಡ್ಡ ಕುಸಿದು ದುರ್ಘಟನೆ ಸಂಭವಿಸಿದೆ. ಕಾಮಗಾರಿಯ ನಿರ್ವಹಣೆ ಮಾಡುತ್ತಿದ್ದ ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಸುಮಂತ ಮತ್ತು ಪರಮೇಶ್ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ನಗರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.












