
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಅಪಘಾತದಲ್ಲಿ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಮಂಗಳವಾರ ನಡೆದಿದೆ. ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಪುತ್ರ ಮಹಮ್ಮದ್ ಹಝೀರಿನ್ (3) ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ.
ಇದನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ

ಮಾಹಿತಿಯ ಪ್ರಕಾರ, ಬಾಲಕನು ಮನೆಯ ಸಮೀಪದಲ್ಲಿರುವ ಅಂಗಡಿಗೆ ತಿಂಡಿ ತರಲು ಹೋಗಿ, ತಿಂಡಿ ತೆಗೆದುಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಹೊಡೆತದ ಪ್ರಮಾಣ ಜಾಸ್ತಿಯಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬ ಹಾಗೂ ಸ್ಥಳೀಯರಲ್ಲಿ ಶೋಕದ ಛಾಯೆ ಆವರಿಸಿದೆ.

ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ














