
ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಎಲ್ಲೆಡೆ ಮಳೆ ಆಗುತ್ತಿದ್ದು, ಇಂದು ಜಿಲ್ಲೆಯ ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಹೀಗಾಗಿ ವಾಹನ ಸವಾರರ ಹಿತದೃಷ್ಟಿಯಿಂದ ಆಗುಂಬೆ ಘಾಟಿ ಸಂಚಾರ ನಿಷೇಧಿಸಲಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಹೌದು, ಆಗುಂಬೆ ಘಾಟಿಯಲ್ಲಿ ಹೆಚ್ಚಿನ ಮಳೆ ಆಗುತ್ತಿದ್ದು, ತಿರುವುಗಳಲ್ಲಿ ಭೂಕುಸಿತ ಉಂಟಾಗಿದೆ. ಹೀಗಾಗಿ ಅಪಘಾತಗಳನ್ನು ತಪ್ಪಿಸಲು ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನಿನ್ನೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 27-06-2024- 15-09-2024 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಪರ್ಯಾಯ ಮಾರ್ಗ:
ಇನ್ನು ಬದಲಿ ಮಾರ್ಗವಾಗಿ ತೀರ್ಥಹಳ್ಳಿ, ಮಾಸ್ತಿಕಟ್ಟೆ, ಸಿದ್ದಾಪುರ, ಕುಂದಾಪುರ, ಉಡುಪಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ.


ಮನವಿ ಸ್ವೀಕರಿಸಿ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಶೀಘ್ರ ಕ್ರಮ ವಹಿಸುವಂತೆ ಆದೇಶಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.













