ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಮೂಡಿಗೆರೆ ತಾಲೂಕಿನ ಭಾರತೀಬೈಲು, ಬಿ.ಹೊಸಳ್ಳಿ ಗ್ರಾಮದಲ್ಲಿ ಹುಲಿಯ ಚಲನವಲನ ಕಾಣಿಸಿಕೊಂಡಿದ್ದು, ಇಲ್ಲಿನ ಗ್ರಾಮಸ್ಥರಲ್ಲಿ ಭಯ ಸೃಷ್ಟಿಸಿದೆ. ಹುಲಿ ಹಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಭಾರತೀಬೈಲು ಗ್ರಾಮ ಸಮೀಪದ ಅರಣ್ಯದಲ್ಲಿ ಸಿಸಿ ಟಿವಿ ಕ್ಯಾಮಾರ ಅಳವಡಿಸಲಾಗಿತ್ತು. ಈ ಸಿಸಿ ಟಿವಿಯಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












