ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ದತ್ತ ಜಯಂತಿ ಆಚರಣೆ ಗಮನದಲ್ಲಿಟ್ಟುಕೊಂಡು ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಕೊಟ್ಟಿಗೆಹಾರ ಗಡಿ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರಿನತ್ತ ಬರುತ್ತಿರುವ ಪ್ರತಿಯೊಂದು ವಾಹನದ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನೂ ಹೆಚ್ಚುವರಿ ವಶದಲ್ಲಿ ನಿಯೋಜಿಸಲಾಗಿದೆ. ಭದ್ರತೆಗಾಗಿ ಮೈಸೂರು, ಕಲಬುರಗಿ ಸೇರಿದಂತೆ ವಿವಿಧ ಹೊರ ಜಿಲ್ಲೆಗಳಿಂದಲೂ ಪೊಲೀಸರು ಬಂದಿದ್ದು, ಬಣಕಲ್ ಪೊಲೀಸ್ ಠಾಣೆಯ ಪಿ.ಎಸ್.ಐ ರೇಣುಕಾ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ಕಾರ್ಯ ನಡೆಯುತ್ತಿದೆ.

ಪ್ರತಾಪ್ ಸಿಂಹ ಕಾರು ಕೂಡ ತಪಾಸಣೆ:
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಾಹನಕ್ಕೂ ತಪಾಸಣೆ ನಡೆಸಲಾಯಿತು.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ
ಅಂಗಡಿ–ಮಂಗಟ್ಟು ಮುಚ್ಚುವಂತೆ ಸೂಚನೆ:
ಬುಧವಾರ ರಾತ್ರಿ 10 ಗಂಟೆಯಿಂದ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ಕೊಟ್ಟಿಗೆಹಾರ, ಬಣಕಲ್, ಮೂಡಿಗೆರೆ ಸೇರಿದಂತೆ. ಹೆದ್ದಾರಿಯಲ್ಲಿರುವ ಎಲ್ಲಾ ಅಂಗಡಿ–ಮಂಗಟ್ಟುಗಳು ಹಾಗೂ ಮದ್ಯ ಮಾರಾಟ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ದತ್ತ ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೊಟ್ಟಿಗೆಹಾರ ಚೆಕ್‌ಪೋಸ್ಟ್ ಪ್ರದೇಶದಲ್ಲಿ ಪೋಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ. (ವರದಿ- ತನು ಕೊಟ್ಟಿಗೆಹಾರ)













