ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿ ತೋಟಕ್ಕೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಕಾಡಾನೆ ಹಿಂಡಿನಿಂದ ಬೇಸತ್ತ ರೈತರು, ಸ್ವತಃ ತಾವೇ ಬೆಳೆಯನ್ನು ನಾಶಪಡಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮ ಸಮೀಪದ ಹಕ್ಕಿಮಿಕ್ಕಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?

ಕಳೆದ 8 ದಿನದಿಂದ ಕಾಫಿತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡಿನಿಂದ ಕಾಫಿ, ಅಡಿಕೆ ಬೆಳೆ ಉಳಿಸಿಕೊಳ್ಳಲು ಬಾಳೆ ಗಿಡ ನಾಶ ಮಾಡಿದ್ದಾರೆ. ಸುಮಾರು ಎರಡು ಎಕರೆಗೂ ಅಧಿಕ ಪ್ರದೇಶದಲ್ಲಿ ಬಾಳೆ ಗಿಡವನ್ನು ಕಡಿದು ಹಾಕಿದ್ದಾರೆ. ಹಕ್ಕಿಮಿಕ್ಕಿ, ಅರೇನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕಾಡಾನೆ ಹಿಂಡಿನ ದಾಂದಲೆಯಿಂದ ಬೆಳೆಗಳು ನಾಶವಾಗಿದೆ.
ಇದನ್ನೂ ಓದಿ; ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
ಇತ್ತ ಕಾಡಾನೆಯನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು.
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ನಲ್ಲಿ ಬುಧವಾರ ಸಂಜೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.












