ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಸತ್ಯಭಾಮಾ ಸಿ. ಆದೇಶಿಸಿದ್ದಾರೆ. ಬೆಂಗಳೂರು ಮಂಗಳೂರು ಹೆದ್ದಾರಿಯ ಹಾಸನದಿಂದ ಮಾರನಹಳ್ಳಿಯವರೆಗಿನ ರಸ್ತೆಯಲ್ಲಿ ಯಾವುದೇ ಘಟನೆಗಳು ನಡೆಯದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 18 ರಿಂದ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಬದಲಿ ಮಾರ್ಗವಾಗಿ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಘಾಟ್ ಅನ್ನು ಬಳಸಬಹುದಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ನಿಯಮ ಫುಲ್ ಬದಲಾವಣೆ!; ಹೊಸ ರೂಲ್ಸ್ ಏನು? ಇಲ್ಲಿದೆ ನೋಡಿ
ಚಾರ್ಮಾಡಿ ಘಾಟ್ಗೆ ಸಂಕಷ್ಟ
ಇನ್ನು ಚಾರ್ಮಾಡಿ ಘಾಟ್ನಲ್ಲಿ ಭಾರಿ ಪ್ರಮಾಣದ ವಾಹನಗಳ ಸಂಚಾರ ಶುರುವಾಗಿದೆ. ಈಗಾಗಲೇ ಚಾರ್ಮಾಡಿ ರಸ್ತೆಯಲ್ಲಿ ಬಿರುಕು ಮೂಡಿದ್ದು ಭಯದಿಂದಲೇ ವಾಹನ ಸಂಚಾರರು ಪ್ರಯಾಣಿಸಬೇಕಿದೆ. ಚಾರ್ಮಾಡಿ ಘಾಟ್ನಲ್ಲಿ ಕೂಡ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ಪ್ರಮಾಣದ ವಾಹನಗಳನ್ನು ಈ ರಸ್ತೆಯಲ್ಲಿ ನಿಷೇಧಿಸಲಾಗಿದೆ. ಚಾರ್ಮಾಡಿ ಘಾಟ್ ರಸ್ತೆಯ ಅಲ್ಲಲ್ಲಿ ರಸ್ತೆ ಹಾಗೂ ತಡೆಗೋಡೆ ಬಿರುಕು ಬಿಟ್ಟಿದ್ದು, ಮಿತಿ ಮೀರಿದ ವಾಹನಗಳು ಸಂಚರಿಸಿದರೆ ಮತ್ತಷ್ಟು ದುರಂತ ಸಂಭವಿಸುವ ಅಪಾಯವಿದೆ.
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿಯಲ್ಲಿ ಜಾಬ್ ಆಫರ್; 344 ಹುದ್ದೆಗಳಿಗೆ ಅರ್ಜಿ ಆಹ್ವಾನ;10th ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ












