ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಒಣಹುಲ್ಲಿದೆ ವಿದ್ಯುತ್ ತಂತಿಗೆ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಕೈಮರ–ಮತ್ತಿಮರ ಸಮೀಪ ಒಣಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮೇಲ್ಭಾಗದಿಂದ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಟ್ರ್ಯಾಕ್ಟರ್ನಲ್ಲಿ ತುಂಬಿದ್ದ ಒಣಹುಲ್ಲಿಗೆ ಬೆಂಕಿ ವೇಗವಾಗಿ ವ್ಯಾಪಿಸಿದೆ. ಘಟನೆಯ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












