ಕಳಸ: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಿಗರ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಮುಂಜಾನೆ 5.30ಗೆ ನಡೆದಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಬೆಂಗಳೂರಿನಿಂದ ಕುದುರೆಮುಖ ಟ್ರಕ್ಕಿಂಗ್ಗೆ ತೆರಳುತ್ತಿದ್ದ ಸುಮಾರು 48 ಮಂದಿ ಇದ್ದ ಬಸ್ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












