ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಜೀಪ್ ವೊಂದು ಪಲ್ಟಿಯಾದ ಘಟನೆ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಗುರುವಾರ ನಡೆದಿದೆ. ಜೀಪ್ ನಲ್ಲಿದ್ದ 7 ಪ್ರವಾಸಿಗರು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಪುತ್ತೂರಿನಿಂದ ಜೀಪ್ ನಲ್ಲಿಯೇ ಆಗಮಿಸಿದ್ದ 7 ಮಂದಿ ಪ್ರವಾಸಿಗರು ದತ್ತಪೀಠಕ್ಕೆ ಆಗಮಿಸಿದ್ದರು. ದತ್ತಪೀಠದಿಂದ ಹಿಂದಿರುಗವಾಗ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಬಳಿ ಅಂಕುಡೊಂಕಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ.
ಗಾಯಳುಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












