ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಈದ್ ಮಿಲಾದ್ ಮತ್ತು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.5 (ಇಂದು) ಮತ್ತು 6 ರಂದು (ನಾಳೆ) ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ಈ ಎರಡೂ ದಿನಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ರಸ್ತೆ/ಮಾರ್ಗಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸೆ.5 ರಂದು (ಇಂದು) ಈದ್ ಅಂಗವಾಗಿ ಹನುಮಂತಪ್ಪ ಸರ್ಕಲ್ ನಿಂದ ಪೋಸ್ಟ್ ಆಫೀಸ್ ಸರ್ಕಲ್ ವರೆಗೆ, ಎಂ.ಜಿ.ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಮತ್ತು ನಿಲುಗಡೆ ಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಾಯ್ಡು ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ತೊಗರಿಹಂಕಲ್ ಸರ್ಕಲ್ ನಿಂದ ಹನುಮಂತಪ್ಪ ಸರ್ಕಲ್ ವರೆಗಿನ ಕೆ.ಎಂ. ರಸ್ತೆಯ ಬಲಬದಿಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ಅನ್ನು ನಿಷೇಧಿಸಿದೆ.
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?
ಎಡಬದಿಯಲ್ಲಿ ದ್ವಿಚಕ್ರ/ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡುವುದು ಬಾರ್ ಲೈನ್ ರಸ್ತೆ, ಮಲ್ಲಂದೂರು ರಸ್ತೆ, ಬಸವನಹಳ್ಳಿ ರಸ್ತೆ, ಮಾರ್ಕೆಟ್ ರಸ್ತೆ ಮತ್ತು ಆರ್.ಜಿ. ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
06 ರಂದು ಗಣಪತಿ ವಿಸರ್ಜನೆ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ನಿಂದ ಪೋಸ್ಟ್ ಆಫೀಸ್ ಸರ್ಕಲ್ ವರೆಗೆ ಎಂ.ಜಿ.ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: IBPS ಬ್ಯಾಂಕ್ ನಲ್ಲಿ ಜಾಬ್ ಆಫರ್; ಸಂಬಳ, ಅರ್ಹತೆ ಕುರಿತು ಇಲ್ಲಿದೆ ನೋಡಿ












